ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾನೆ ಪೊಲೀಸರು ಬಂಧಿಸಿದ್ದಾರೆ.
BIGG NEWS : ರಾಜ್ಯ ಸರ್ಕಾರ’ದಿಂದ ‘ಕಾಡು ಪ್ರಾಣಿ ದಾಳಿ’ಯಿಂದ ಉಂಟಾಗುವ ಹಾನಿಯ ‘ಪರಿಹಾರ ಧನ’ ಹೆಚ್ಚಿಸಿ ಆದೇಶ
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 9 ರಂದು ಬಸವರಾಜನ್, ಸೌಭಗ್ಯ ವಿರುದ್ಧ ದೂರು ದಾಖಲಾಗಿತ್ತು. ನವೆಂಬರ್ 10 ರಂದು ಬಸವರಾಜನ್ ರನ್ನು ಬಂಧಿಸಲಾಗಿತ್ತು. ಸೌಭಾಗ್ಯ ತಲೆಮರೆಸಿಕೊಂಡಿದ್ದರು.
ನಿನ್ನೆ ತಡರಾತ್ರಿ ದಾವಣಗೆರೆಯಲ್ಲಿ ಸೌಭಗ್ಯ ಬಸವರಾಜನ್ ರನ್ನು ಬಂಧಿಸಲಾಗಿದೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
BIGG NEWS : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್ : ಖಾಸಗಿ ಶಾಲೆಗಳಿಗೆ ರಜೆ ಘೋಷಣೆ