ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಂಧಿತ ನಾಯಕ ಪಾರ್ಥ ಚಟರ್ಜಿಯನ್ನ ಟಿಎಂಸಿಯಿಂದ ಅಮಾನತುಗೊಳಿಸಲಾಗಿದ್ದು, ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಗುರುವಾರ ಮಾಹಿತಿ ನೀಡಿದ್ದಾರೆ.
ಎಸ್ಎಸ್ಸಿ (ಶಾಲಾ ಸೇವಾ ಆಯೋಗ) ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಆರೋಪದ ಮೇಲೆ ಚಟರ್ಜಿ ಶನಿವಾರ ಬಂಧಿಸಲಾಗಿದೆ. ರಾಜ್ಯ ಶಿಕ್ಷಣ ಸಚಿವರಾಗಿದ್ದಾಗ ಸರ್ಕಾರಿ ಶಾಲೆಗಳಲ್ಲಿನ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಯನ್ನ ಕಾನೂನುಬಾಹಿರವಾಗಿ ನೇಮಕ ಮಾಡುವಲ್ಲಿ ಅವ್ರ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಪ್ರಸ್ತುತ, ಅವರು ಇಡಿ ವಶದಲ್ಲಿದ್ದಾರೆ.