ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
BIGG NEWS : ರಾಜ್ಯಾದ್ಯಂತ ಭಾರೀ ಮಳೆಗೆ 70 ಮಂದಿ ಸಾವು, 3,559 ಮನೆಗಳು ಸಂಪೂರ್ಣ ಹಾನಿ : ಸಿಎಂ ಬೊಮ್ಮಾಯಿ
ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಅಲ್ಲಲ್ಲಿ ಹಾನಿಯಾಗಿ, ಹೊದವಾಡ-ಕೊಟ್ಟಮುಡಿಯಿಂದ ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅರ್ಧ ಭಾಗ ಕುಸಿದಿದ್ದು, ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ.
BIGG NEWS : ವಸತಿ ರಹಿತ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ ವಸತಿ ಸೌಲಭ್ಯ