ಬೀದರ್ : ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ವಸ್ಥವಾಗಿದ್ದು, ಶಾಲೆಗಳಿಗೆ ತೆರಳಲು ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚರಿಕೆ ಕ್ರಮವಾಗಿ ಬೀದರ್ ಜಿಲ್ಲೆಯ ಅಂಗನವಾಡಿ, 1 ರಿಂದ 5 ನೇ ತರಗತಿ ಶಾಲೆಗಳಿಗೆ ಇಂದು ರಜೆ ಘೋಷಿಸಿ ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.