ಬೆಂಗಳೂರು : ಜೀವಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟ 3 ದಿನದ ಬಳಿಕ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತಾ ಒದಗಿಸಲಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಸಾರ್ವಜನಿಕರು ಪ್ರವೇಶದ ಹಿನ್ನೆಲೆಯಲ್ಲಿ ಡಿಟೆಕ್ಟರ್ ಅಳವಡಿಸಲಾಗಿದ್ದು, ಮೆಟೆಲ್ ಡಿಟೆಕ್ಟರ್ ಜೊತೆಗೆ ಹೆಚ್ಚಿನ ಪೊಲೀಸ್ ರನ್ನು ನಿಯೋಜನೆ ಮಾಡಲಾಗಿದೆ.
ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಮಹಾನಿರ್ದೇಶಕರನ್ನು ಕರೆಸಿಕೊಂಡು ಚರ್ಚೆ ನಡೆಸಿದ್ದೇನೆ. ವಿರೋಧ ಪಕ್ಷದ ನಾಯಕರ ಭದ್ರತೆಯನ್ನು ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ.