ಬುದ್ಗಾಮ್‌ : ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿವೆ. ಯೋಧರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ.

ಬುಧವಾರ ಬೆಳಿಗ್ಗೆ, ಜಿಲ್ಲೆಯ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೋಲ್‌ನಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತ್ರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಈ ಭಯೋತ್ಪಾದಕರನ್ನ ಎನ್‌ಕೌಂಟರ್ ಮಾಡಿದವು ಮತ್ತು ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದರು. ವಾಂಟೆಡ್ ಭಯೋತ್ಪಾದಕ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್ ಭಯೋತ್ಪಾದಕರನ್ನ ಎನ್‌ಕೌಂಟರ್‌ನಲ್ಲಿ ಸುತ್ತುವರಿಯಲಾಗಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಿಭಾಗ) ವಿಜಯ್ ಕುಮಾರ್ ಹೇಳಿದ್ದಾರೆ.

ಭಯೋತ್ಪಾದಕ ಲತೀಫ್ ರಾಥರ್ ಸೇರಿದಂತೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಮೂವರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಸುತ್ತುವರಿಯಲಾಗಿದೆ ಎಂದು ಕುಮಾರ್ ಟ್ವೀಟ್ ಮಾಡಿದ್ದಾರೆ.

Share.
Exit mobile version