ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಅಟಾರ್ನಿ ಜನರಲ್ ಆಗಿ ಮರಳುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಪ್ರಸ್ತಾಪವನ್ನು ಅವರು ತಿರಸ್ಕರಿಸಿದ್ದಾರೆ.
67 ವರ್ಷದ ಮುಕುಲ್ ರೋಹಟ್ಗಿ ಅವರು 2017ರ ಜೂನ್ನಲ್ಲಿ ಅಟಾರ್ನಿ ಜನರಲ್ ಹುದ್ದೆಯಿಂದ ಕೆಳಗಿಳಿದಿದ್ದರು. ಅವರ ನಂತರ ಕೆ.ಕೆ.ವೇಣುಗೋಪಾಲ್ ಅಧಿಕಾರ ವಹಿಸಿಕೊಂಡರು. ವೇಣುಗೋಪಾಲ್ ಅವರ ವಿಸ್ತೃತ ಅಧಿಕಾರಾವಧಿ ಸೆಪ್ಟೆಂಬರ್ 30 ರಂದು ಕೊನೆಗೊಳ್ಳುತ್ತದೆ. ಅವರು ಐದು ವರ್ಷಗಳ ಕಾಲ ಕೇಂದ್ರದ ಉನ್ನತ ಕಾನೂನು ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.
ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು : ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ಗುಡುಗು
ಚಾಮರಾಜನಗರ: ಎಎಸ್ಐ ಮೇಲೆ ಕಲ್ಲೆಸೆತ ಪ್ರಕರಣ ಆರೋಪಿಗಳ ರಕ್ಷಣೆಗೆ ನಿಂತ್ರಾ ಹಿರಿಯ ಅಧಿಕಾರಿಗಳು!?