ಜಮ್ಮು-ಕಾಶ್ಮೀರಾ : ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನಂತ್ರ ಜಮ್ಮು ಮತ್ತು ಕಾಶ್ಮೀರದ ನಾಯಕರಲ್ಲಿ ಸಾಕಷ್ಟು ಅಸಮಾಧಾನವಿದೆ. ಅವ್ರ ರಾಜೀನಾಮೆಗೆ ದುಃಖ ವ್ಯಕ್ತಪಡಿಸಿ ಜಮ್ಮು-ಕಾಶ್ಮೀರ ಕಾಂಗ್ರೆಸ್ನ ಹಲವು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದುವರೆಗಿನ ಮಾಹಿತಿ ಪ್ರಕಾರ, ಗುಲಾಂ ನಬಿ ಆಜಾದ್ ಅವರನ್ನ ಬೆಂಬಲಿಸಿ ಜಿಎಂ ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಸಾಂಸ್ಥಿಕ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ ಮತ್ತು ನಾಯಕತ್ವವು ಪಕ್ಷದೊಂದಿಗೆ ದೊಡ್ಡ ಮಟ್ಟದಲ್ಲಿ “ವಂಚನೆ” ಮಾಡುತ್ತಿದೆ ಎಂದು ಆರೋಪಿಸಿದರು. ಈಗಾಗಲೇ ಸಮಸ್ಯೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಆಜಾದ್ ರಾಜೀನಾಮೆ ಮತ್ತೊಂದು ಹೊಡೆತ ಎಂದು ಪರಿಗಣಿಸಲಾಗಿದೆ. ಈ ಹಿಂದೆ ಕಪಿಲ್ ಸಿಬಲ್, ಅಶ್ವಿನಿ ಕುಮಾರ್ ಸೇರಿದಂತೆ ಹಲವು ದೊಡ್ಡ ನಾಯಕರು ಪಕ್ಷ ತೊರೆದಿದ್ದರು.
J&K | GM Saroori, Haji Abdul Rashid, Mohd Amin Bhat, Gulzar Ahmad Wani and Choudhary Mohd Akram resign from the primary membership of Congress "in support of Ghulam Nabi Azad". pic.twitter.com/PciPTd3QS3
— ANI (@ANI) August 26, 2022