ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸದ್ಯ ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯ ಡಾ.ಎಸ್.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
BIGG NEWS : ಇಂದು ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah
ಇಂದು ಜ್ಞಾನಯೋಗಾಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯ ಡಾ.ಎಸ್. ಬಿ. ಪಾಟೀಲ್, ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಮಾತನಾಡುತ್ತಿದ್ದಾರೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ. ಶ್ರೀಗಳ ಪಲ್ಸ್ ರೇಟ್, ಬಿಪಿ ಎಲ್ಲವೂ ನಾರ್ಮಲ್ ಇದೆ. ಶ್ರೀಗಳು ಆಹಾರ ಸೇವಿಸುತ್ತಿಲ್ಲ. ಗಂಜಿ, ನೀರು ಸೇವನೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಗೇಟ್ ಮುಂಭಾಗದಲ್ಲಿ ಭಾರಿ ಸಂಖ್ಯೆಯ ಭಕ್ತರು ನೆರೆದಿದ್ದಾರೆ. ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ.
ಇನ್ನು ಈಗಾಗಲೇ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಹೀಗಿರುವಾಗ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂಬಿ ಪಾಟೀಲ್ ಕೂಡಾ ಶ್ರೀಗಳನ್ನು ನೋಡಲು ಆಗಮಿಸಲಿದ್ದಾರೆ.