ಕೇದಾರನಾಥ: ಉತ್ತರಾಖಂಡದ ಕೇದಾರನಾಥದಲ್ಲಿ ಮಂಗಳವಾರ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಆರ್ಯನ್ ಕಂಪನಿಗೆ ಸೇರಿದ್ದು, ಇದರಲ್ಲಿ ಪೈಲಟ್ ಸೇರಿದಂತೆ 6 ಜನರು ಪ್ರಯಾಣಿಸುತ್ತಿದ್ದರು. ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರುದ್ರಪ್ರಯಾಗದಿಂದ 2 ಕಿ.ಮೀ ದೂರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ದಟ್ಟವಾದ ಮಂಜು ಕವಿದಿದೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ವಿಷಯದಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ
ಮೂಲಗಳ ಪ್ರಕಾರ, ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಆರು ಪ್ರಯಾಣಿಕರು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಈ ಘಟನೆಗೆ ಕಾರಣ ದಟ್ಟ ಮಂಜು ಎಂದು ಹೇಳಲಾಗಿದೆ. .