ಬೆಂಗಳೂರು : ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
BIGG NEWS : ಧಾರವಾಡ ಜಿಲ್ಲೆಯಲ್ಲಿ ಮಳೆಯ ಆರ್ಭಟ : ಹೆಬ್ಬಸೂರು ಗ್ರಾಮದ ಶಾಲೆಗಳಿಗೆ ನುಗ್ಗಿದ ನೀರು
ರಾಜ್ಯ ಸರ್ಕಾರವು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನು ನೇಮಿಸಿ ಆದೇಶ ಹೊರಡಿಸಿದ್ದು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ. ಶಾಂತಲಾ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ್ ಬಾಬು, ಗುಲ್ಬರ್ಗ ವಿವಿಗೆ ಡಾ. ಬಿ.ಶರಣಪ್ಪ ಅವರನ್ನು ಕುಲಸಚಿವರಾಗಿ ನೇಮಿಸಿ ಆದೇಶ ಹೊರಡಿಸಿದೆ.