ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ.
ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಪ್ರತಿಫಲ ಅನುಭವಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.