ನವದೆಹಲಿ: ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಜಾಹೀರಾತಿನಿಂದ ದೂರವಿರಿ ಅಂತ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಲಹೆ ನೀಡಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಲಹೆಯನ್ನು ನೀಡಲಾಗಿದೆ ಮತ್ತು ಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಆನ್ಲೈನ್ ಬೆಟ್ಟಿಂಗ್ ವೆಬ್ಸೈಟ್ಗಳು / ಪ್ಲಾಟ್ಫಾರ್ಮ್ಗಳ ಹಲವಾರು ಜಾಹೀರಾತುಗಳು ಕಾಣಿಸಿಕೊಂಡಿರುವ ನಿದರ್ಶನಗಳ ಹಿನ್ನೆಲೆಯಲ್ಲಿ ಈ ಸಲಹೆಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಹಿಂದೆ ಕೂಡ ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಜಾಹೀರಾತಿನಿಂದ ದೂರವಿರುವಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಲಹೆ ನೀಡಿತ್ತು, ದೇಶದ “ಹೆಚ್ಚಿನ ಭಾಗಗಳಲ್ಲಿ” ಬೆಟ್ಟಿಂಗ್ ಮತ್ತು ಜೂಜಾಟವು ಕಾನೂನುಬಾಹಿರವಾಗಿದೆ ಮತ್ತು ಗ್ರಾಹಕರಿಗೆ ಗಮನಾರ್ಹ ಆರ್ಥಿಕ ಮತ್ತು ಸಾಮಾಜಿಕ-ಆರ್ಥಿಕ ಅಪಾಯವನ್ನು ಉಂಟುಮಾಡುತ್ತದೆ ಎಂದು ಆಗ ಹೇಳಿತ್ತು.