ಚನ್ನೈ: ವಿದ್ಯಾರ್ಥಿನಿಯೊಬ್ಬಳ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಶಾಲೆಗೆ ನುಗ್ಗಿ ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟದಲ್ಲಿ ತೊಡಗಿದ್ದರಿಂದ ಭಾನುವಾರ ಇಲ್ಲಿ ಹಿಂಸಾಚಾರ ಭುಗಿಲೆದ್ದಿದ್ದ ಘಟನೆ ನಡೆದಿದೆ. ಇದರಲ್ಲಿ ಪೊಲೀಸ್ ಸಿಬ್ಬಂದಿಗೂ ಕೂಡ ಗಾಯಗಳವಾಗಿವೆ ಅಂತ ತಿಳಿದು ಬಂದಿದೆ. ಇದೇ ವೇಳೆ ಹಿಂಸಾತ್ಮಕ ಗುಂಪುಗಳನ್ನು ನಿಯಂತ್ರಿಸಲು ಪೊಲೀಸರು ಕನಿಷ್ಠ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದೇ ವೇಳೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಜನರಿಗೆ ಮನವಿ ಮಾಡಿದ್ದು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದು. ಕಲ್ಲಕುರಿಚಿಗೆ ಧಾವಿಸುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ತಳ್ಳಿದ ಪ್ರತಿಭಟನಾಕಾರರು ಸಮೀಪದ ಚಿನ್ನಸಲೆಮ್ನಲ್ಲಿರುವ ‘ಅಂತರರಾಷ್ಟ್ರೀಯ’ ಶಾಲೆಯ ಆವರಣಕ್ಕೆ ನುಗ್ಗಿ ಸಂಸ್ಥೆಯ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಗೆ ಬೆಂಕಿ ಹಚ್ಚಿದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಕೆಲವರು ಪೊಲೀಸ್ ಬಸ್ಸಿಗೂ ಬೆಂಕಿ ಹಚ್ಚಿದ್ದಾರೆ ಅಂತ ತಿಳಿದು ಬಂದಿದೆ.
#WATCH Tamil Nadu | Violence broke out in Kallakurichi with protesters entering a school, setting buses ablaze, vandalizing school property as they sought justice over the death of a Class 12 girl pic.twitter.com/gntDjuC2Zx
— ANI (@ANI) July 17, 2022