ನವದೆಹಲಿ : ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
Supreme Court dismisses plea of former Janta Dal (S) MP Prajwal Revanna, accused of rape and sexual abuse, against the Karnataka High Court's order denying him bail.
— ANI (@ANI) November 11, 2024
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ.
ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಇತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.