ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದಿಂದ ತೀರ್ಪು ನೀಡಿದೆ.
ಮಹತ್ವದ ತೀರ್ಪಿನಲ್ಲಿ, ಏಳು ನ್ಯಾಯಾಧೀಶರ ಪೀಠವು – 6:1 ಬಹುಮತದಿಂದ- ಎಸ್ಸಿ / ಎಸ್ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದೆ. ಉದ್ಯೋಗ ಮತ್ತು ಪ್ರವೇಶದಲ್ಲಿ ಕೋಟಾಕ್ಕಾಗಿ ಎಸ್ಸಿ ಮತ್ತು ಎಸ್ಟಿ ವರ್ಗಗಳಲ್ಲಿ ಉಪ ವರ್ಗೀಕರಣ ಮಾಡಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
Supreme Court holds sub-classification within reserved classes SC/STs is permissible
CJI DY Chandrachud says there are 6 opinions. Justice Bela Trivedi has dissented. CJI says majority of us have overruled EV Chinnaiah and we hold sub classification is permitted
7-judge bench… pic.twitter.com/BIXU1J5PUq
— ANI (@ANI) August 1, 2024