ನವದೆಹಲಿ: ಪ್ರಸ್ತುತ ಅಸೀಸ್ನಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್ನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಮಣಿಸಿದ ಭಾರತ ಸತತ ಎರಡನೇ ಗೆಲುವನ್ನು ದಾಖಲಿಸಿದೆ.
ನೆದರ್ಲೆಂಡ್ಸ್ ವಿರುದ್ಧ ಭಾರತ ತಂಡವು 56 ರನ್ ಗಳಿಂದ ದೊಡ್ಡ ಗೆಲುವು ಸಾಧಿಸಿದೆ. ಭಾರತ ನೀಡಿದ್ದ 180 ರನ್ಗಳ ಗುರಿಯನ್ನು ಬೆನ್ನಟ್ಟಿದ ನೆದರ್ಲೆಂಡ್ಸ್ ತಂಡ 20 ಓವರ್ಗಳಲ್ಲಿ ಕೇವಲ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಟಿಮ್ ಪ್ರಿಂಗಲ್ ತಂಡದ ಪರ ಅತ್ಯಧಿಕ ಸ್ಕೋರರ್ ಆಗಿದ್ದರು. 15ಎಸೆತಗಳನ್ನು ಎದುರಿಸಿದ ಪ್ರಿಂಗಲ್ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ 20 ರನ್ ಗಳಿಸಿದರು. ಅದೇ ಸಮಯದಲ್ಲಿ, ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಸಿಂಗ್, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಈ ಪಂದ್ಯದಲ್ಲಿ ಕ್ರಮವಾಗಿ ಎರಡು ವಿಕೆಟ್ಗಳನ್ನು ಪಡೆದುಕೊಂಡಿದ್ದಾರೆ.