ಶಿವಮೊಗ್ಗ : ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸುಳ್ಳು ಮಾಹಿತಿಯನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದರೇ ಕೆಲಸದಿಂದ ವಜಾ ಮಾಡಬಹುದು: ಸುಪ್ರಿಂಕೋರ್ಟ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪಿಎಫ್ ಐ ನಿಷೇಧ ಮಾಡಲು ಮುಂದಾಗಿದೆ. ಇದನ್ನು ಕೇಂದ್ರ ಸರ್ಕಾರ ಮದೊಲೇ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ ಎಸ್ ಡಿಪಿಐ,ಪಿಎಫ್ಐ ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಎಂದರು.
ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ,ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.