ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಈ ವೇಳೆ ಬೈಕ್ ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೃತಪಟ್ಟವರನ್ನು ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ ಮಾಸಳಿ (40) ಹಾಗೂ ನರೇಶ್ (8) ಎಂದು ಗುರುತಿಸಲಾಗಿದೆ. ಇವರು ಅಂತ್ಯಕ್ರಿಯೆ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ.