ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ರಾಜ್ಯದಲ್ಲಿ ಹೆಚ್ಚಾದ ಚಳಿಯ ವಾತಾವರಣ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಮಾಯಸಂದ್ರ ಬಳಿ ಲಾರಿ ಡಿಕ್ಕಿಯಾಗಿ ಉತ್ತರ ಭಾರತ ಮೂಲದ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಡಿಕ್ಕಿ ಹೊಡೆದು ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಮೂವರು ಕೂಲಿ ಕಾರ್ಮಿಕರ ಶವಗಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಶೀಘ್ರವೇ ಪ್ರಧಾನಿ ಮೋದಿಯಿಂದ ‘ಐಟಿ ಕಾರಿಡಾರ್’ ಉದ್ಘಾಟನೆ |Namma Metro