ತುಮಕೂರು ; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಇಂದು ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಜರಂಗದಳ, ಹಿಂದೂ ರಕ್ಷಣಾ ವೇದಿಕೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಇಂದು ತಿಪಟೂರು ಬಂದ್ ಗೆ ಕರೆ ನೀಡಿವೆ.
ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ತಿಪಟೂರು ನಗರದ ಬಿ.ಹೆಚ್.ರಸ್ತೆಯ ಬಹುತೇಕ ಅಂಗಡಿಗಳು ಬಂದ್ ಮಾಡಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಕ ಬೆಂಬಲ ನೀಡಲಾಗಿದೆ.