ಬೆಂಗಳೂರು : ಗೌರಿ ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಖಾಸಗಿ ಬಸ್ ಸಂಸ್ಥೆಗಳಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಾರಿಗೆ ಸಚಿವ ಶ್ರೀರಾಮುಲು, ಗೌರಿ ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಲವು ಧನದಾಹಿ ಖಾಸಗಿ ಬಸ್ ಗಳು ನಿಗಧಿತ ದರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಗೌರಿ ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಲವು ಧನದಾಹಿ ಖಾಸಗಿ ಬಸ್ ಗಳು ನಿಗಧಿತ ದರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/3
— B Sriramulu (@sriramulubjp) August 28, 2022
ಖಾಸಗಿ ಬಸ್ ಗಳು ರೂಟ್ ಗೆ ನಿಗಧಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಯಾರಾದರೂ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಖಾಸಗಿ ಬಸ್ ಗಳು ರೂಟ್ ಗೆ ನಿಗಧಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಯಾರಾದರೂ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು. 2/3
— B Sriramulu (@sriramulubjp) August 28, 2022
ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ ಎಂದಿದ್ದಾರೆ.
ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ. 3/3
— B Sriramulu (@sriramulubjp) August 28, 2022