ಬಾಗಲಕೋಟೆ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಗಮೇಶ್ (20), ಕಿರಣ್ ನಾಯಕ್ (21) ಮೃತ ದುರ್ದೈವಿಗಳು, ಸಂಗಮೇಶ್ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಾಗಲಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.