ತುಮಕೂರು : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಮಾಗೋಡು ಗೇಟ್ ಬಳಿ ನಡೆದಿದೆ.
BIGG NEWS : ‘ಪೋಕ್ಸೋ’ ಕೇಸ್ : ಇಂದು ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ : ಜೈಲೋ..? ಬೇಲೋ…?
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜೇಶ್ (22) ಹಾಗೂ ನಾಗರಾಜು (21) ಮೃತ ದುರ್ದೈವಿಗಳು. ಪೃಥ್ವಿರಂಗ ಎಂಬುವರು ಗಾಯಗೊಂಡಿದ್ದು, ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಜಾಬ್ : ಹಳಿ ಮೇಲೆ ಆಟವಾಡುತ್ತಿದ್ದ ಮಕ್ಕಳಿಗೆ ರೈಲು ಡಿಕ್ಕಿ: ಮೂವರು ಸಾವು