ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ.
ಇಂದು ಬೆಳಂಬೆಳಗ್ಗೆ ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೆಎಸ್ ಅರ್ ಟಿಸಿ ಬಸ್ ಹಾಗೂ ಕಾರಿನ ನಡವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಗಿರೀಶ್ (37), ಮಾನ್ಯ (17) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.