ರಾಯಚೂರು : ಕಾಲೇಜಿಗೆ ಹೋಗುವುದಾಗಿ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರ ಪೈಕಿ ಇಬ್ಬರು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನಿಬ್ಬರು ಗೋವಾಕ್ಕೆ ತೆರಳಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕಾಲೇಜಿಗೆ ಹೋಗುವುದಾಗಿ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಾಲ್ವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ.
ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ. ಇಬ್ಬರು ಶಕ್ತಿನಗರ ಮತ್ತು ಇನ್ನಿಬ್ಬರು ರಾಯಚೂರು ನಗರದ ವಿದ್ಯಾರ್ಥಿನಿಯರು ಆಗಿದ್ದಾರೆ. ನಾಲ್ಕು ವಿದ್ಯಾರ್ಥಿನಿಯರ ಪೋಷಕರಲ್ಲಿ ಒಬ್ಬರಿಂದ ಮಹಿಳಾ ಠಾಣೆಗೆ ದೂರು ಪ್ರಕರಣ ದಾಖಲಿಸಲಾಗಿದೆ.
ಮಾಹಿತಿ ಮೇರೆಗೆ ಸದರಬಜಾರ ಠಾಣೆ ಪಿಎಸ್ ಐ ಹಾಗೂ ಮಹಿಳಾ ಠಾಣಾ ಪಿಎಸ್ಐ ನೇತೃತ್ವದಲ್ಲಿ ಎರಡು ತಂಡ ರಚನೆ ಮಾಡಿದ್ದಾರೆ. ತೀವ್ರ ಹುಡುಕಾಟ ನಡೆಸಲಾಗಿದೆ ಬಳಿಕ ಇಬ್ಬರು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ.
ಉಳಿದ ಇಬ್ಬರಿಗಾಗು ಮುಂದುವರಿದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅವರು ಗೋವಾಕ್ಕೆ ತೆರಳಿರುವ ಅನುಮಾನದ ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಪೋಷಕರು ಕೂಡ ಚಿಂತಿಸುವಂತಾಗಿದೆ.