ತುಮಕೂರು : ತುಮಕೂರಿನಲ್ಲಿ ಭೀಕರ ಅಪಘಾತವಾಗಿದ್ದು, ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
BREAKING NEWS : ಮಂಗಳೂರಿನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ` 12 ಆರೋಪಿಗಳನ್ನು ವಶ’ಕ್ಕೆ ಪಡೆದ ಪೊಲೀಸರು
ತುಮಕೂರು ನಗರದ ಹನುಮಂತಪುರ ಬ್ರಿಡ್ಜ್ ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಚಿನ್ (21) ಮಲ್ಲಿಕಾರ್ಜುನ್ (24) ಮೃತಪಟ್ಟಿದ್ದಾರೆ. ಮೃತ ಯುವಕರು ಹಾವೇರಿ ಜಿಲ್ಲೆಯವರು ಎಂದು ಗುರುತಿಸಲಾಗಿದ್ದು, ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಹನುಮಂತಪುರದ ಬ್ರಿಡ್ಜ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.