ನವದೆಹಲಿ : ಅಕ್ಟೊಂಬರ್ 11ರಿಂದ ಅಂಡರ್-17 ಮಹಿಳಾ ವಿಶ್ವಕಪ್ ಫುಟ್ಬಾಲ್ ನಡೆಯಲಿದ್ದು, ಭಾರತ ಆತಿಥ್ಯಕ್ಕೆ ವಹಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಕೇಂದ್ರ ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್, “ಅಕ್ಟೊಂಬರ್ 11ರಿಂದ ನಡೆಯಲಿರುವ ಅಂಡರ್-17 ಮಹಿಳಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಭಾರತ ಅತಿಥ್ಯ ವಹಿಸಲಿದೆ. ಈ ಸಂಬಂಧ ಖಾತರಿ ಪತ್ರಗಳಿಗೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ” ಎಂದರು.