ಕೆಎನ್ಎನ್ಡಿಜಿಟಲ್ ಡೆಸ್ಕ್ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವ್ರಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಬಾಂಬ್ ಇಟ್ಟು ಉಡಾಯಿಸುವುದಾಗಿ ಕಿಡಿಗೇಡಿಗಳು ಬೆದರಿಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112ರ ವಾಟ್ಸಾಪ್ ಸಂಖ್ಯೆಗೆ ಈ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಹಾಕಲಾದ ಸಂಖ್ಯೆ ಶಾಹಿದ್ ಖಾನ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಬೆದರಿಕೆಯ ನಂತ್ರ ಪೊಲೀಸರು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದ್ರಂತೆ, ಪೊಲೀಸರು, ಸೈಬರ್ ಮತ್ತು ಕಣ್ಗಾವಲು ಸೆಲ್ ತಂಡವು ಈ ಪ್ರಕರಣದ ತನಿಖೆ ನಡೆಸುತ್ತಿದೆ.
ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನ ಹುಡುಕುತ್ತಿದ್ದಾರೆ. ಆರೋಪಿಗಳನ್ನ ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನ ನಿಯೋಜಿಸಲಾಗಿದೆ. ಆಗಸ್ಟ್ 2ರ ಸಂಜೆ ಸುಶಾಂತ್ ಗಾಲ್ಫ್ ಸಿಟಿ ಇನ್ಸ್ಪೆಕ್ಟರ್ ಶೈಲೇಂದ್ರ ಗಿರಿ ಅವ್ರು ಕಚೇರಿಯಲ್ಲಿದ್ದರು ಎಂದು ಮಾಧ್ಯಮಗಳಿಗೆ ತಿಳಿಸಿದರು. ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನ ಹುಡುಕುತ್ತಿದ್ದಾರೆ. ಆರೋಪಿಗಳನ್ನ ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನ ನಿಯೋಜಿಸಲಾಗಿದೆ.