ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯ ಹಲವಡೆ ಶಾಲೆಗಳಿಗ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಇಂದು ಬೆಳಗಾವಿ ನಗರ, ಬೆಳಗಾವಿ ತಾಲೂಕು, ಖಾನಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.