ನವದೆಹಲಿ : ಉಪರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರು ಮುನ್ನೆಗೆ ಬರ್ತಿದ್ದು, ಶೆಟ್ಟರ್ಗೆ ಅದೃಷ್ಟ ಒಲಿಯುತ್ತಾ? ಅನ್ನೋ ಚರ್ಚೆ ಶುರುವಾಗಿದೆ.
ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಅದ್ರಂತೆ, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವ್ರ ಉತ್ತರಾಧಿಕಾರಿಯನ್ನ ನಿರ್ಧರಿಸುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆಯಾಗ್ತಿದೆ.
ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಚರ್ಚೆ ನಡೆಯುತ್ತಿದ್ದು, ಇಂದು ಸಂಜೆ 6 ಗಂಟೆಗೆ ನಡೆಯುವ ಸಂಸದೀಯ ಮಂಡಳಿ ಸಭೆಯ ನಂತ್ರ ಅಭ್ಯರ್ಥಿಯ ಹೆಸರು ಪ್ರಕಟಿಸಲಿದೆ. ಇನ್ನು ಈ ಉಪರಾಷ್ಟ್ರಪತಿ ಅಭ್ಯರ್ಥಿಯ ರೇಸ್ನಲ್ಲಿ ಜಗದೀಶ್ ಶೆಟ್ಟರ್ ಸೇರಿ ಮುಖ್ತಾರ್ ಅಬ್ಬಾಸ್ ನಖ್ವಿ, ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಹೆಸರಿವೆ.