ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ದಂಪತಿ ಸಜೀವ ದಹನವಾಗಿವಾಗಿದ್ದಾರೆ. ಮೃತರನ್ನು ಪತಿ ರಾಗಯ್ಯ (39) ಹಾಗೂ ಪತ್ನಿ ಶಿಲ್ಪಾ (35) ಎಂದು ಗುರುತಿಸಲಾಗಿದೆ.
ರಾತ್ರಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯೊಳಗೆ ಮಲಗಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.