ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
BIG NEWS: ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆಗೆ ಆಗಮಿಸಿದ ವಿವಿಧ ಕಲಾತಂಡಗಳು
ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.