ಹೈದರಾಬಾದ್ : ಹೈದರಾಬಾದ್ ನ ಸಿಕಂದರಾಬಾದ್ ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತದಲ್ಲಿ ಇದೀಗ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
ಸಿಕಂದರಾಬಾದ್ ನ ರೂಬಿ ಹೋಟೆಲ್ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿನ ರೂಬಿ ಎಲೆಕ್ಟ್ರಿಕ್ ವೆಹಿಕಲ್ ಶೋರಂ ನಲ್ಲಿ ಬ್ಯಾಟರಿ ಸ್ಪೋಟಗೊಂಡು, ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ.ಈ ವೇಳೆ ಹೋಟೆಲ್ ನಲ್ಲಿದ್ದ ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ.
ಹೋಟೆಲ್ ನಲ್ಲಿ 25 ಮಪ್ರವಾಸಿಗರು ತಂಗಿದ್ದರು ಎನ್ನಲಾಗಿದ್ದು, ಈ ಪೈಕಿ 8 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಲವರನ್ನು ಹೋಟೆಲ್ ನಿಂದ ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. 2 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಸಿಕಂದರಾಬಾದ್ ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ.