ಬೆಂಗಳೂರು : ಈಗಾಗಲೇ ಕಲ್ಬುರ್ಗಿ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚಿಗೆ ಸಂಪುಟ ಸಭೆ ನಡೆಸಿದ್ದೇವೆ. ಹಾಗಾಗಿ ಮುಂದಿನ ಸಂಪುಟ ಸಭೆಯನ್ನು ನಂದಿ ಬೆಟ್ಟ ಹಾಗೂ ವಿಜಯಪುರದಲ್ಲಿ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೈರದೇನಹಳ್ಳಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈರದೇನಹಳ್ಳಿ ಸರ್ಕಾರದ ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಸಂಪುಟ ಸಭೆಯನ್ನು ನಂದಿಬೆಟ್ಟ ಹಾಗು ವಿಜಯಪುರದಲ್ಲಿ ಬೆಳಗಾವಿ ವಿಭಾಗದ ಸಚಿವ ಸಂಪುಟ ಸಭೆ ಮಾಡುತ್ತೇವೆ. ಈಗಾಗಲೇ ಕಲಬುರ್ಗಿ ಹಾಗು ಮಲೆಮಾದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದ್ದೇವೆ ಎಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.