ಮಂಡ್ಯ : ಒಂದು ಕಡೆ ರಾಜ್ಯದಲ್ಲಿ ಇದೇ ತಿಂಗಳು ಬಹುದೊಡ್ಡ ಕ್ರಾಂತಿ ಆಗಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸ್ಪೋಟಕವಾದ ಹೇಳಿಕೆ ನೀಡಿದ್ದು ಇದರ ಮಧ್ಯ ಸಂಸದ ಎಲ್ ಆರ್ ಶಿವರಾಮೇಗೌಡ ಸಹ ಮುಂದಿನ ತಿಂಗಳು ಅಂದರೆ ನವೆಂಬರ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ಡಿ.ಕೆ. ಶಿಕುಮಾರ್ ಅವರ ಹೋರಾಟಕ್ಕೆ ಫಲ ಸಿಕ್ಕೇ ಸಿಗುತ್ತದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ನವೆಂಬರ್ ನಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿರುವ ಬಗ್ಗೆ ಮಾಹಿತಿ ಇದೆ ಎಂದು ನಾಗಮಂಗಲದಲ್ಲಿ ಶಿವರಾಮೇಗೌಡ ತಿಳಿಸಿದ್ದಾರೆ.