ಬೆಂಗಳೂರು : ದೇಶದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಉಗ್ರ ಕೃತ್ಯಗಳಿಗೆ ದುಬೈನಿಂದ ಹಣ ಸಂಗ್ರಹಿಸಿ ಕರ್ನಾಟಕ ಹಾಗೂ ಕೇರಳದ ಕಾರ್ಯಕರ್ತರ ಮೂಲಕ ಬಿಹಾರಕ್ಕೆ ತಲುಪಿಸುತ್ತಿದ್ದ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಪಿಎಫ್ಐ ಕಾರ್ಯಕರ್ತರ ವಿರುದ್ಧ 2022ರ ಜುಲೈನಲ್ಲಿ ಬಿಹಾರದ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿತ್ತು.
ಆರೋಪಿಗಳು ಪಿಎಫ್ಐ ಸಂಘಟನೆಯ ಮೂಲಕ ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಚಟುವಟಿಕೆಗಳ ಮೂಲಕ ವಿವಿಧ ಧರ್ಮಗಳು ಮತ್ತು ಗುಂಪುಗಳ ಸದಸ್ಯರ ನಡುವೆ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸಲು ಮತ್ತು ಧಾರ್ಮಿಕ ದ್ವೇಷವನ್ನು ಹರಡಲು ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಸಂಚು ರೂಪಿಸಿದ್ದಾರೆ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.