ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಬಳ್ಳಾರಿ ಕೇಂದ್ರ ಕಾರಾಗೃಹ ದಿಂದ ಶಂಕಿತ ಉಗ್ರ ನೊಬ್ಬನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ಇದ್ದರೆ ‘ಡಿನೋಟಿಫಿಕೇಷನ್’ಗೆ ಮನವಿ : ಸಚಿವ ಕೃಷ್ಣ ಭೈರೇಗೌಡ
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ನನ್ನು ಎನ್ಐಎ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಎರಡು ದಿನಗಳಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸುಲೇಮಾನ್ ಬಾಂಬ್ ಸ್ಫೋಟಕ್ಕೆ ಸ್ಕೆಚ್ ಹಾಕಿದ್ದ ಸುಳಿವು ಆಧರಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈತ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಬಳ್ಳಾರಿ ಕೌಲ್ ಬಜಾರ್ನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಮಿನಾಜ್ ನಿಷೇಧಿತ ಪಿಎಫ್ಐ ಕಾರ್ಯಕರ್ತನಾಗಿದ್ದ. ಐಸಿಸ್ ಉಗ್ರರ ಜತೆ ನಂಟು ಹೊಂದಿದ್ದ. ಅಲ್ಪಸಂಖ್ಯಾತ ಸಮುದಾಯದ ಯುವಕರನ್ನು ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ. 2023 ರ ಡಿಸೆಂಬರ್ 18 ರಂದು ದೆಹಲಿ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಎನ್ಐಎ ದಾಳಿ ನಡೆಸಿತ್ತು. ಆಗ ಈತನನ್ನು ಬಂಧಿಸಲಾಗಿತ್ತು.
ಮತ್ತೊಂದೆಡೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನಿಗಾಗಿ ಎನ್ಐಎ ಪೊಲೀಸರ ಹಾಗೂ ಸಿಸಿಬಿ ಪೊಲೀಸರ ಶೋಧ ಕಾರ್ಯ ತೀವ್ರಗೊಂಡಿದೆ. ಇದೀಗ ಸುಲೇಮಾನ್ನನ್ನು ಮತ್ತೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿರುವುದು, ಕೆಫೆಯಲ್ಲಿ ಬಾಂಬ್ ಇಟ್ಟವನ ಪತ್ತೆಗೆ ನೆರವಾಗಲಿದೆ ಎನ್ನಲಾಗಿದೆ.