ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಳೆದ ಮಾರ್ಚ್ ಒಂದರಂದು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಐಎ ಅಧಿಕಾರಿಗಳು ಉಗ್ರಸಂಘಟನೆ ಜೊತೆಗೆ ನಂಟು ಹೊಂದಿದ್ದ ಎನ್ನಲಾದ ಸೈಯದ್ ಸಮೀರ್ ಎನ್ನುವ ವ್ಯಕ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಮೇಶ್ವರಂ ‘ಕೆಫೆ ಬಾಂಬ್ ಬ್ಲಾಸ್ಟ್’ಗೆ ಬಿಗ್ ಟ್ವಿಸ್ಟ್: ಸ್ಪೋಟದ ಹಿಂದೆ ‘ISIS ಉಗ್ರ’ರ ಕೃತ್ಯದ ಶಂಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಳ್ಳಾರಿಯಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ಶಂಕಿತ ಉಗ್ರ ಸುಲೇಮಾನನ್ನು ಕಳೆದ ಎರಡು ದಿನಗಳಿಂದ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ಆತನ ಜೊತೆಗೆ ನಂಟು ಹೊಂದಿದ್ದ ಯುವಕನನ್ನು ಕೂಡ ಕರೆಸಿ ಒಂದು ಗಂಟೆಗಳ ಕಾಲ ಇದುವರೆಗೂ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇದೀಗ ಘಟನೆಗೆ ಸಂಬಂಧಿಸಿದಂತೆ ಸೈಯದ್ ಸಮೀರ್ ನನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಇದೀಗ ಬೆಂಗಳೂರು ತುಮಕೂರು ಬಳ್ಳಾರಿ ಹಾಗೂ ಉತ್ತರ ಕನ್ನಡದ ಭಟ್ಕಳದವರೆಗೂ ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
BREAKING : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಹೇಯ ಕೃತ್ಯ : ಬಾಯ್ ಫ್ರೆಂಡ್ ಜೊತೆ ಸೇರಿ ಮಗಳಿಗೆ ಹಿಂಸೆ ನೀಡಿದ ತಾಯಿ