ಬೆಂಗಳುರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತರ ಜೊತೆಗೆ ನಿರಂತರ ಸಂಪರ್ಕ ಹೊಂದಿರುವ ಇಬ್ಬರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಬಂಧಿತ ಇಬ್ಬರು ನಿಷೇಧಿತ ಅಲ್ ಹಿಂದ್ ಟ್ರಸ್ಟ್ ಜೊತೆಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ.
ರಾಮೇಶ್ವರಂ ಕೆಫೆ ಸ್ಪೋಟ ಹಾಗೂ ಹಳೇ ಸ್ಪೋಟ ಪ್ರಕರಣಗಳ ನಡುವೆ ಸಾಮ್ಯತೆ ಕಂಡು ಬಂದಿದೆ. ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆದು ಎನ್ ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.