ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪ್ರದೇಶದಲ್ಲಿ ಶಂಕಿತ ಉಗ್ರನೊಬ್ಬನನ್ನು ಬಂಧಿಸಿದ್ದಾರೆ.
ಹೌದು ಜಿಗಣಿಯಲ್ಲಿ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ಎನ್ ಐ ಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ಎನ್ಐಎ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪ್ರದೇಶಕ್ಕೆ ತೆರಳಿದ್ದಾರೆ. ಈ ವೇಳೆ ಗಿರೀಶ್ ಬೋರಾ ಅಲಿಯಾಸ್ ಗೌತಮನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.