ಬೆಂಗಳೂರು : ಬೆಂಗಳೂರಿನಲ್ಲಿ ನೈಜೇರಿಯಾ ಮೂಲದ ವ್ಯಕ್ತಿಯೊಬ್ಬರನ್ನು ಮರದ ತುಂಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಿನ್ನೆ ಮಧ್ಯಾಹ್ನ 12 ಗಂಟೆಗೆ ಚಿಕನ್ ತರಲು ಮನೆಯಿಂದ ವಿದೇಶಿ ಪ್ರಜೆ ಹೊರ ಬಂದಿದ್ದರು. ಈ ವೇಳೆ ಸ್ಥಳೀಯ ನಿವಾಸಿ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ಮರದ ತುಂಡಿನಿಂದ ವಿದೇಶಿ ಪ್ರಜೆ ಮೇಲೆ ಹಲ್ಲೆ ಮಾಡಲಾಗಿದೆ.
ಹಲ್ಲೆ ಬಳಿಕ ವಿದೇಶಿ ಪ್ರಜೆ ಸ್ಥಳದಿಂದ ಕೊಂಚ ದೂರು ಒಡಿ ಹೋಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪೊಲೀಸರು ಹಲ್ಲೆಮಾಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.