ಬೆಂಗಳೂರು : ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಇಂದು ಬೃಹತ್ ಮೆರವಣಿಗೆ ಮೂಲಕ ಜನಪಟ್ಟಣ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತ ಎನ್ಡಿಎ ಮೈತ್ರಿ ಪಕ್ಷದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಚನ್ನಪಟ್ಟಣಕ್ಕೆ ಯಾವ ಅಭ್ಯರ್ಥಿ ನಿಲ್ಲಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಇದೀಗ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.
ಹೌದು ಈಗಾಗಲೇ ಸಿಪಿ ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗು ಜೆಡಿಎಸ್ ಯಾವ ಅಭ್ಯರ್ಥಿಯನ್ನು ಚನ್ನಪಟ್ಟಣ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿ ಇದ್ದರು. ಇದೀಗ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಡದ ಮೇರೆಗೆ ಕೊನೆಯದಾಗಿ ನಿಖಿಲ್ ಕುಮಾರಸ್ವಾಮಿ ಎನ್ ಡಿ ಎ ಅಭ್ಯರ್ಥಿಯಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇನ್ನೇನು ಅವರ ಹೆಸರು ಅಧಿಕೃತವಾಗಿ ಘೋಷಣೆ ಅಷ್ಟೇ ಬಾಕಿ ಇದೆ ಎಂದು ತಿಳಿದುಬಂದಿದೆ.