ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ A1 ಆರೋಪಿ ಎಂದು ಉಲ್ಲೆಖಿಸಿ FIR ದಾಖಲಿಸಲಾಗಿದೆ.
ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ A1 ಆರೋಪಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, A2 ಆರೋಪಿಯಾಗಿ ಇಡಿ, A3 ಕೇಂದ್ರ ಬಿಜೆಪಿ ಪದಾಧಿಕಾರಿಗಳು, A4 ಆರೋಪಿಯಾಗಿ ನಳಿನ್ ಕುಮಾರ್ ಕಟೀಲ್, A5 ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ A6 ಆರೋಪಿಗಳನ್ನಾಗಿ ಮಾಡಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಆದರ್ಶ ಅಯ್ಯರ್ ಎಂಬುವವರು ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ.
ದೂರಿನ ಪ್ರತಿ, ದಾಖಲೆಗಳನ್ನು ಠಾಣೆಗೆ ಕಳುಹಿಸಲು ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸೂಚನೆ ನೀಡಿತ್ತು. ಬೆಂಗಳೂರಿನ ತಿಲಕ ನಗರ ಠಾಣೆಗೆ ಕಳುಹಿಸುವಂತೆ ಜಡ್ಜ್ ಸೂಚಿಸಿದ್ದರು. ಹಾಗಾಗಿ ಇದೀಗ ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ನಿರ್ಮಲ ಸೀತಾರಾಮನ್ ಸೇರಿದಂತೆ ಬಿವೈ ವಿಜಯೇಂದ್ರ ಹಾಗೂ ಇತರರ ವಿರುದ್ಧ FIR ದಾಖಲಾಗಿದೆ.