ಬೆಂಗಳೂರು : ಈಗಾಗಲೇ ಹೇಳಿರುವಂತೆ ಸರ್ಕಾರಿ ನೌಕರರು ಆದಾಯ ತೆರಿಗೆ (IT) ಪವತಿಸುವವರನ್ನು ಹೊರತುಪಡಿಸಿ ಉಳಿದ ಅರ್ಹ ಪಡೀತರ ಚೀಟಿದಾರರ BPL ಕಾರ್ಡ್ ಗಳನ್ನು ರದ್ದು ಮಾಡಲ್ಲ ಎಂದು ಆಹಾರ ಇಲಾಖೆಯ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದರು. ಇದೀಗ ಸರ್ಕಾರ ಈ ಕುರಿತಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (2)ರ ನಡವಳಿಯಲ್ಲಿ ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು.
ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದ.
1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ.
2. ನೋಡಲ್ ಅಧಿಕಾರಿ ರವರು ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದ್ದು ಮೇಲ್ವಿಚಾರಣೆಯನ್ನು ಮಾಡುವುದು.
3. ಹೀಗೆ ಮುರುಸ್ತಾಪನಗೊಂಡಿರುವ PHH ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು NIC ಸಹಯೋಗದೊಂದಿಗೆ ದಿನಾಂಕ: 25/11/2024 ರೊಳಗೆ ಜಂಟಿ ನಿರ್ದೇಶಕರು (ಸಂ.ವಿ) ರವರು ಕ್ರಮವಹಿಸಬೇಕು.
4. ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತ್ತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ರವರು ಕ್ರಮವಹಿಸತಕ್ಕದ್ದು, ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸುವುದು.
5. ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯ ವಾಗದಂತೆ ಕ್ರಮ ವಹಿಸುವುದು.
6. ದಿನಾಂಕ: 25/11/2024 ರೊಳಗೆ ಪೂರ್ಣಗೊಳಿಸತಕ್ಕದ್ದು,