ವಾಷಿಂಗ್ಟನ್ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ್ದಾರೆ. ಆದರೆ ಇರಾನ್-ಇಸ್ರೇಲ್ ನಡುವೆ ಯಾವುದೇ ಕದನ ವಿರಾಮದ ಒಪ್ಪಂದಕ್ಕೆ ಬಂದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಹೇಳಿಕೆ ನೀಡಿದ್ದಾರೆ.
ಇರಾನ್-ಇಸ್ರೇಲ್ ನಡುವೆ ಯಾವುದೇ ಕದನ ವಿರಾಮದ ಬಗ್ಗೆ ಒಪ್ಪಂದಕ್ಕೆ ಬಂದಿಲ್ಲ ಎಂದು ಟ್ರಂಪ್ ಹೇಳಿಕೆಯ ನಂತರ ಇರಾನ್ ವಿದೇಶಾಂಗ ಸಚಿವರು ಹೇಳಿದ್ದಾರೆ.
12 ದಿನಗಳ ಯುದ್ಧ ಮುಗಿದಿದ್ದು, ಇರಾನ್ ಮತ್ತು ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದಾರೆ.
ತನ್ನ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಗೆ ಪ್ರತೀಕಾರವಾಗಿ ಮತ್ತು ಅಸ್ಥಿರ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಕ್ಕಾಗಿ ಇರಾನ್ ಸೋಮವಾರ ಕತಾರ್ ಮತ್ತು ಇರಾಕ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ್ದಾರೆ.
"CONGRATULATIONS TO EVERYONE! It has been fully agreed by and between Israel and Iran that there will be a Complete and Total CEASEFIRE (in approximately 6 hours from now, when Israel and Iran have wound down and completed their in progress, final missions!), for 12 hours, at… pic.twitter.com/yDugSCqM9H
— Press Trust of India (@PTI_News) June 23, 2025