ಬೆಂಗಳೂರು : ಮೆಟ್ರೋ ದರ ಹೆಚ್ಚಳ ಆಗಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಏನು ಹೇಳಿಕೆ ನೀಡಿದ್ದರೊ, ಈ ಕುರಿತು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ‘BMRCL’ ಹಿರಿಯ ಅಧಿಕಾರಿಗಳು ನಮಗೆ ಮಾಹಿತಿ ಬಂದಮೇಲೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಅಲ್ಲಿಯವರೆಗೂ ನಮ್ಮ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾಹಿತಿ ಬಂದ ನಂತರ ಬಳಿಕವಷ್ಟೇ ಟಿಕೇಟ್ ದರ ಇಳಿಕೆ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.








