ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಈಗಾಗಲೇ ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಅನುಮಾನ ಬೇಡ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನಾನು ಸಿಎಂ ಆಗಬಹುದು ಎಂಬ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳುತ್ತಿದ್ದು, ಅವರು ಅವರ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಯಾವುದೇ ಅನುಮಾನ ಬೇಡ ಮುಖ್ಯಮಂತ್ರಿ ಸ್ಥಾನದಲ್ಲಿ ನಾನೇ ಮುಂದುವರೆಯಲಿದ್ದೇನೆ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಇನ್ನು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಎಂದಿಗೂ ದ್ವೇಷದ ರಾಜಕೀಯ ಮಾಡಿಲ್ಲ . ಆದರೆ ಬಿಜೆಪಿಯವರು ನಮ್ಮ ವಿರುದ್ಧ ದ್ವೇಷದ ರಾಜಕೀಯ ಮಾಡಿದರು. ನಾವು ಈ ಹಿಂದೆಯೂ ದ್ವೇಷದ ರಾಜಕಾರಣ ಮಾಡಿಲ್ಲ ಈಗಲೂ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣ ಆಗಿದೆ.ತನಿಖೆ ಮಾಡಿ ಸಂಪುಟಕ್ಕೆ ವರದಿ ಸಲ್ಲಿಸಲು ಹೇಳಿದ್ದೇನೆ. ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ಕೋವಿಡ್ ಹಗರಣ, 40% ಕಮಿಷನ್ ಸೇರಿ ಎಲ್ಲದರ ತನಿಖೆ ನಡೆಸಲಾಗುತ್ತದೆ. ಯಾವ ಯಾವ ಪ್ರಕರಣ ಯಾವ ಹಂತದಲ್ಲಿ ಇದೆ ಎಂದು ತಿಳಿಯಲು ಸಮಿತಿ ರಚನೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.