ಬೆಂಗಳೂರು : ಖಾಸಗಿ ಸಾರಿಗೆ ಸಂಘಟನೆಗಳು ನಿನ್ನೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಶಾಂತಿ ನಗರದಲ್ಲಿರುವ RTO ಕಚೇರಿಗೆ ಮುತ್ತಿಗೆ ಹಾಕಿದ್ದವು. ಇದರ ಬೆನ್ನಲ್ಲೆ ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ಓಡಿಸುವಂತಿಲ್ಲ. ಖಾಸಗಿ ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
ಹೌದು ಖಾಸಗಿ ಸಾರಿಗೆ ಸಂಘಟನೆಗಳ ಮನವಿಗೆ ಇದೀಗ ಸಾರಿಗೆ ಇಲಾಖೆ ಸ್ಪಂದಿಸಿದ್ದು, ಇಂದು ಸಾರಿಗೆ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ನಿಂತಿದ್ದು, 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಅನಧಿಕೃತ ಎಲೆಕ್ಷ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಸಾರಿಗೆ ಇಲಾಖೆ ಸೂಚನೆ ಇದ್ದರೂ ಕೂಡ ಡೋಂಟ್ ಕೇರ್ ಎನ್ನದೆ ಚಾಲಕರು ಅನಧಿಕೃತವಾಗಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ರಸ್ತೆಗಿಳಿಸುತ್ತಿದ್ದಾರೆ. ಆದ್ದರಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ವಾಹನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.