ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ವೇಳೆ ಡಿಕೆ ಶಿವಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಇರುವವರೆಗೂ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ತಿಳಿಸಿದರು.
ಸಮಾವೇಶದ ಕುರಿತಂತೆ ಡಿಕೆ ಶಿವಕುಮಾರ್ ಅವರು ಮಾತನಾಡಿ ವಿಪಕ್ಷದವರು ನಮ್ಮ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ಉದ್ಯೋಗ ಹೆಚ್ಚಳಕ್ಕೆ ನಾವು ಕ್ರಮ ಕೈಗೊಂಡಿದ್ದೇವೆ. ಕೊಟ್ಟ ಭರವಸೆಯಂತೆ 5 ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ರಾಜ್ಯದ ಜನರ ಋಣ ತೀರಿಸಲು ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ನಮ್ಮನ್ನು ನಂಬಿ 136 ಸ್ಥಾನಗಳನ್ನು ಕೊಟ್ಟಿದ್ದೀರಿ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು.
ಈ ಪಕ್ಷದವರು ಟೀಕೆಗಳನ್ನು ಮಾಡ್ತಾ ಇರಲಿ 5 ಗ್ಯಾರಂಟಿಗಳ ಜೊತೆಗೆ ಇಂದು ಆರನೇ ಗ್ಯಾರಂಟಿ ಕೊಟ್ಟಿದ್ದೇವೆ. ಇಂದು ಭೂ ಗ್ಯಾರಂಟಿ ಕೊಟ್ಟಿದ್ದೇವೆ. ಪ್ರವಾಸೋದ್ಯಮ ಸಂಸ್ಕೃತಿ ಕನ್ನಡ ಇಲಾಖೆಯಲ್ಲಿ ಹೊಸ ಯೋಜನೆ, ಜನರ ಬದುಕಿಗೆ ಹೊಸ ಶಕ್ತಿ ಕೊಡಲು ಕಾರ್ಯಕ್ರಮ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಾ ವರ್ಗದವರ ಬಗ್ಗೆಯೂ ನಾವು ಆಲೋಚನೆ ಮಾಡುತ್ತೇವೆ ನುಡಿದಂತೆ ನಡೆದಿದ್ದೇವೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.
ಈ ಒಂದು ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಮುಖಂಡರು ಹಾಗು ಕಾರ್ಯಕರ್ತರು ಭಾಗವಹಿಸಿದ್ದರು.